Monday, April 4, 2022

Udupi district court recruitment 2022 apply online

  Monday, April 4, 2022

🏆📙𝐉𝐍𝐀𝐍𝐀𝐃𝐄𝐄𝐏𝐓𝐈📙🏆
☞𝚂𝚞𝚋𝚓𝚎𝚌𝚝 𝚁𝚎𝚕𝚊𝚝𝚎𝚍:udupi district court recruitment.
☞𝚂𝚞𝚋𝚓𝚎𝚌𝚝𝚕𝚊𝚗𝚐𝚞𝚊𝚐𝚎:𝙺𝚊𝚗𝚗𝚊𝚍𝚊
☞𝚁𝚎𝚕𝚊𝚝𝚎𝚍 𝙳𝚎𝚙𝚊𝚛𝚝𝚖𝚎𝚗𝚝 :𝙰𝚕𝚕.
☞𝙿𝚕𝚊𝚌𝚎 : 𝙺𝚊𝚛𝚗𝚊𝚝𝚊𝚔𝚊.
☞𝙳𝚊𝚝𝚎 𝚘𝚏 𝙿𝚞𝚋𝚕𝚒𝚜𝚑𝚎𝚍:04/04/2022
☞𝚂𝚞𝚋𝚓𝚎𝚌𝚝 𝙵𝚘𝚛𝚖𝚊𝚝: 𝚓𝚙𝚓/𝚙𝚍𝚏
☞𝚂𝚞𝚋𝚓𝚎𝚌𝚝 𝚜𝚒𝚣𝚎:𝟿𝟻𝚔𝚋
☞𝙽𝚞𝚖𝚋𝚎𝚛 𝚘𝚏 𝚙𝚊𝚐𝚎𝚜:01
☞𝚂𝚌𝚊𝚗𝚎𝚍 𝚌𝚘𝚙𝚢: 𝚈𝚎𝚜
☞𝙴𝚍𝚒𝚝𝚊𝚋𝚕𝚎 𝚃𝚎𝚡𝚝 : no
☞𝙿𝚊𝚜𝚜𝚠𝚘𝚛𝚍 𝙿𝚛𝚘𝚝𝚎𝚌𝚝𝚎𝚍 :𝙽𝚘
☞𝙻𝚒𝚗𝚔 𝙳𝚘𝚠𝚗𝚕𝚘𝚊𝚍 : 𝙰𝚟𝚒𝚕𝚊𝚋𝚕𝚎
☞𝙲𝚘𝚙𝚢 𝚃𝚎𝚡𝚝 : 𝙽𝚘
☞𝙿𝚛𝚒𝚗𝚝𝚒𝚗𝚐 𝙴𝚗𝚊𝚋𝚕𝚎: 𝚈𝚎𝚜!
☞𝚀𝚞𝚊𝚕𝚒𝚝𝚢 𝚘𝚏 𝚜𝚞𝚋𝚓𝚎𝚌𝚝: 𝙷𝚒𝚐𝚑
☞𝚂𝚞𝚋𝚎𝚌𝚝 𝚜𝚒𝚣𝚎 𝚁𝚎𝚍𝚞𝚌𝚎𝚍:𝙽𝚘
☞𝙿𝚊𝚜𝚜𝚠𝚘𝚛𝚍 :𝙽𝚘!
☞𝙲𝚘𝚜𝚝 𝚘𝚏 𝚂𝚞𝚋𝚎𝚌𝚝 :  𝙵𝚛𝚎𝚎!!
☞𝚄𝚜𝚎 𝙿𝚎𝚛𝚜𝚘𝚗𝚊𝚕𝚕𝚢
☞𝚂𝚊𝚟𝚎 𝚆𝚊𝚝𝚎𝚛 !𝚂𝚊𝚟𝚎 𝙵𝚘𝚛𝚎𝚜𝚝!


ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 17 ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 29,2022 ರಿಂದ ಮೇ 5,2022ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ :

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿಯ ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ :

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿಯ ಜವಾನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 28,950/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ವಯೋಮಿತಿ :

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿಯ ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಯ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಯ್ಕೆಯ ವಿಧಾನ :

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿಯ ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕನ್ನಡ ಓದಲು ಮತ್ತು ಬರೆಯಲು ಅಭ್ಯರ್ಥಿ ಹೊಂದಿರುವ ಸಾಮರ್ಥ್ಯ ಮತ್ತು ಸಾಮಾನ್ಯ ಜ್ಞಾನದ ಬಗ್ಗೆ ಸಂದರ್ಶನ ನಡೆಸಲಾಗುವುದು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ತದನಂತರ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ನಿಗದಿತ ಅರ್ಜಿ ಶುಲ್ಕ:

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿಯ ಜವಾನ ಹುದ್ದೆಗಳಿಗೆ ಸಾಮಾನ್ಯ ವರ್ಗ, ಪ್ರವರ್ಗ-1, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅರ್ಜಿ ಶುಲ್ಕ ಪಾವತಿಸಬೇಕಾದ ವಿಧಾನ :

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/udupi-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan downloadಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.

ಈ ರೀತಿ net banking/credit card/ debit card/challan download ಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಮೇ 7,2022ರೊಳಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.

ಈ ಮೇಲಿನ ವಿಧಾನಗಳನ್ನು ಹೊರತು ಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ನಗದು, ಮನಿ ಆರ್ಡರ್ ಇವುಗಳ ರೂಪದಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ :

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/udupi-onlinerecruitment ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 29,2022 ರಿಂದ ಮೇ 5,2022ರ ರಾತ್ರಿ 11:59ರೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

logoblog

Thanks for reading Udupi district court recruitment 2022 apply online

Previous
« Prev Post

No comments:

Post a Comment